Wednesday, 7 May 2008

ಮಳೆ ನಿಂತು ಹೋದ ಮೇಲೆ...


ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವುದು ಏನು ಉಳಿದು ಹೋಗಿದೆ
ಹೇಳಲಿ ಹೇಗೆ ತಿಳಿಯದಾಗಿದೆ.

ನೋವಿನಲ್ಲಿ ಜೀವ ಜೀವ ಅರಿತ ನಂತರ
ನಲಿವು ಬೇರೆ ಏನಿದೆ ಏಕೆ ಅಂತರ
ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ
ಒಂದೇ ಸಾರಿ ನೀ ಕೇಳೆಯಾ ಈ ಸ್ವರ
ಮನಸಲ್ಲಿ ಚೂರು ಜಾಗ ಬೇಕಿದೆ
ಕೇಳಲಿ ಹೇಗೆ ತಿಳಿಯದಾಗಿದೆ.

ಕಣ್ಣು ತೆರೆದು ಕಾಣುವ ಕನಸೇ ಜೀವನ
ಸಣ್ಣ ಹಠವ ಮಾಡಿದೆ ಹೃದಯ ಈ ದಿನ
ಎದೆಯ ದೂರವಾಣಿಯ ಕರೆಯ ರಿಂಗಣ
ಕೇಳು ಜೀವವೆ ಏತಕೀ ಕಂಪನ
ಹೃದಯವು ಇಲ್ಲೆ ಕಳೆದೆ ಹೋಗಿದೆ
ಹುಡುಕಲೇ ಬೇಕೆ ತಿಳಿಯದಾಗಿದೆ.


ಚಿತ್ರ: ಮಿಲನ
ಬರೆದವರು: ಜಯಂತ ಕಾಯ್ಕಿಣಿ

No comments: